Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:32 - ಕನ್ನಡ ಸತ್ಯವೇದವು C.L. Bible (BSI)

32 “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಜೆ ಕೊನಾಕ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಜೊ ಮನುನ್ ಸಾಂಗ್ತ್ಯಾತ್, ತೆಕಾ ಮಿಯಾಬಿ ಸರ್ಗಾಚ್ಯಾ ರಾಜಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಮಾಜೊಚ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:32
12 ತಿಳಿವುಗಳ ಹೋಲಿಕೆ  

ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು