Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:33 - ಕನ್ನಡ ಸತ್ಯವೇದವು C.L. Bible (BSI)

33 ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ಜೆ ಕೊನ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಕಾ ಸ್ವಿಕಾರ್ ಕರಿನಾ, ತೆಕಾ ಮಿಯಾಬಿ ಸರ್‍ಗಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಸ್ವಿಕಾರ್ ಕರಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:33
11 ತಿಳಿವುಗಳ ಹೋಲಿಕೆ  

ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


“ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು