Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:36 - ಕನ್ನಡ ಸತ್ಯವೇದವು C.L. Bible (BSI)

36 ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತುಮ್ಚ್ಯಾ ಕುಟ್ಮಾಚಿಚ್ ಲೊಕಾ ತುಮ್ಚೆ ಮೊಟೆ ದುಸ್ಮಾನ್ ಹೊತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:36
14 ತಿಳಿವುಗಳ ಹೋಲಿಕೆ  

ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಆದರೆ ಇದನ್ನೆಲ್ಲಾ ನನಗೆ ಮಾಡಿದವನು ನೀನು I ನನಗೆ ಸರಿಯಾದವನು, ಗೆಳೆಯನು, ನನ್ನಾಪ್ತಮಿತ್ರನು II


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು