Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:4 - ಕನ್ನಡ ಸತ್ಯವೇದವು C.L. Bible (BSI)

4 ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆಸ್‍ಭಕ್ತ್ ಸಿಮಾವ್; ಅನಿ ಜೆಜುಕ್ ಘಾತ್‍ ಕರಲ್ಲೊ ಜುದಾಸ್ ಇಸ್ಕರಿಯೊತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:4
19 ತಿಳಿವುಗಳ ಹೋಲಿಕೆ  

ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ,


ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.


ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.


ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು