Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:40 - ಕನ್ನಡ ಸತ್ಯವೇದವು C.L. Bible (BSI)

40 “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ಜೆ ಕೊನ್ ತುಮ್ಕಾ ಸ್ವಾಗತ್ ಕರ್‍ತಾ ತೊ ಮಾಕಾಚ್ ಸ್ವಾಗತ್ ಕರ್‍ತಾ; ಅನಿ ಜೊ ಕೊನ್ ಮಾಕಾ ಸ್ವಾಗತ್ ಕರ್‍ತಾ ತೊ ಮಾಕಾ ಧಾಡಲ್ಲ್ಯಾ ದೆವಾಕುಚ್ ಸ್ವಿಕಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:40
18 ತಿಳಿವುಗಳ ಹೋಲಿಕೆ  

ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.”


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು