Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:41 - ಕನ್ನಡ ಸತ್ಯವೇದವು C.L. Bible (BSI)

41 ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೊ ಕೊನ್ ದೆವಾಚಿ ಖಬರ್ ಸಾಂಗ್ತಲ್ಯಾಕ್ ತೊ ದೆವಾಚಿ ಖಬರ್ ಸಾಂಗ್ತಲೊಚ್ ಮನುನ್ ಸ್ವಾಗತ್ ಕರ್‍ತಾ ತೆಕಾ ತ್ಯಾ ದೆವಾಚಿ ಬರಿ ಖಬರ್ ಸಾಂಗ್ತಲ್ಯಾಚ್ಯಾ ಭೊಮಾನಾತ್ಲೊ ವಾಟೊ ಗಾವ್ತಾ. ಅನಿ ಕೊನ್ ತರ್ ಎಕಾ ಬರ್‍ಯಾ ಮಾನ್ಸಾಕ್ ತೊ ಬರೊ ಮಾನುಸ್ ಮನುನ್ ಸ್ವಾಗತ್ ಕರ್‍ತಾ ಹೊಲ್ಯಾರ್, ತ್ಯಾ ಬರ್‍ಯಾ ಮಾನ್ಸಾಚ್ಯಾ ಭೊಮಾನಾತ್ಲೊ ವಾಟೊ ತೆಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:41
27 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು