Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:5 - ಕನ್ನಡ ಸತ್ಯವೇದವು C.L. Bible (BSI)

5 ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಬಾರಾ ಜಾನಾ ಶಿಸಾಕ್ನಿ ಜೆಜುನ್ ಸುಚ್ನಾ ದಿವ್ನ್, “ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ನಾಹೊಲ್ಯಾರ್ ಸಮಾರಿಯಾಚ್ಯಾ ಗಾಂವಾತ್ನಿ ಜಾವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:5
27 ತಿಳಿವುಗಳ ಹೋಲಿಕೆ  

ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,


ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.


ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು