Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:8 - ಕನ್ನಡ ಸತ್ಯವೇದವು C.L. Bible (BSI)

8 ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಶಿಕ್ ಹೊತ್ತ್ಯಾಕ್ನಿ ಬರೆ ಕರಾ, ಮರಲ್ಲ್ಯಾಕ್ನಿ ಝಿತ್ತೆ ಕರಾ, ಕುಸ್ಟ್‌ ರೊಗ್ ಹೊತ್ತ್ಯಾಕ್ನಿ ಗುನ್ ಕರಾ, ಅನಿ ಗಿರೆ ಭಾಯ್ರ್ ಕಾಡಾ, ತುಮ್ಕಾ ಫುಕೊಟ್ ಗಾವ್ಲಾ, ತಸೆಮನುನ್ ತುಮಿಬಿ ಫುಕೊಟ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:8
15 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.


ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು