ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.
ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.
ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.
ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.