Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:11 - ಕನ್ನಡ ಸತ್ಯವೇದವು C.L. Bible (BSI)

11 ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಆಜ್ ಸಗೊಳ್ ಜಲ್ಮಲ್ಲ್ಯಾ ಮಾನ್ಸಾತ್ನಿ ಜುವಾಂವಾ ತವ್ಡೊ ಮೊಟೊ ಕೊನ್ ಬಿ ನಾ. ಖರೆ ಸರ್‍ಗಾಚ್ಯಾ ರಾಜಾತ್ ಎಗ್ದಮ್ ಬಾರಿಕ್ ಮನುನ್ ಹೊತ್ತೊಬಿ ಜುವಾಂವ್ ಬಾವ್ತಿಸಾಚ್ಯಾನ್ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:11
31 ತಿಳಿವುಗಳ ಹೋಲಿಕೆ  

ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.


ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು.


ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.


ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು