Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:14 - ಕನ್ನಡ ಸತ್ಯವೇದವು C.L. Bible (BSI)

14 ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತುಮಿ ತೆಂಚ್ಯಾ ಗೊಸ್ವಿಯಾಂಚ್ಯಾ ವರ್‍ತಿ ವಿಶ್ವಾಸ್ ಕರುಕ್ ಮನುನ್ ಯೌಜುಲ್ಯಾಸಿ ಜಾಲ್ಯಾರ್ ಯೆತಲೊ ಹಾಯ್ ಮನುನ್ ಸಾಂಗಲ್ಲೊ ಎಲಿಯಾ ಜುವಾಂವುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:14
12 ತಿಳಿವುಗಳ ಹೋಲಿಕೆ  

“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.


ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು