Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:18 - ಕನ್ನಡ ಸತ್ಯವೇದವು C.L. Bible (BSI)

18 ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್, ಜುವಾಂವ್ ಯೆಲೊ ಅನಿ ತೆನಿ ಉಪಾಸ್ ಕರ್‍ಲ್ಯಾನ್ ಅನಿ ವಾಯ್ನ್ ಫಿವ್ಕ್ ನಾ. ತನ್ನಾ ಸಗ್ಳ್ಯಾ ಲೊಕಾನಿ ತೆಕಾ ಗಿರೊಲಾಗ್ಲಾ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:18
17 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.


ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.


ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ.


ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು