Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:21 - ಕನ್ನಡ ಸತ್ಯವೇದವು C.L. Bible (BSI)

21 :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:21
31 ತಿಳಿವುಗಳ ಹೋಲಿಕೆ  

ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.


ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.


ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.


ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.


ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.


ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು.


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು