ಮತ್ತಾಯ 11:25 - ಕನ್ನಡ ಸತ್ಯವೇದವು C.L. Bible (BSI)25 ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತ್ಯಾ ಎಳಾರ್ ಜೆಜುನ್,“ಬಾಬಾ, ಸರ್‍ಗಾ ಅನಿ ಜಿಮ್ನಿಚ್ಯಾ ಧನಿಯಾ; ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಬುದ್ವಂತಾ ಅನಿ ಶಾನ್ಯಾ ಲೊಕಾನಿಕ್ನಾ ನಿಪ್ವುನ್ ಥವಲ್ಲೆ, ಬಾರಿಕ್ ಪೊರಾಂಚ್ಯಾ ಸರ್ಕಿ ಹೊತ್ತ್ಯಾ ಲೊಕಾಕ್ನಿ ತಿಯಾ ದಾಕ್ವುಲೆಯ್”. ಅಧ್ಯಾಯವನ್ನು ನೋಡಿ |