Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:28 - ಕನ್ನಡ ಸತ್ಯವೇದವು C.L. Bible (BSI)

28 “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಮೊಟಿ-ಮೊಟಿ ವಜ್ಜಿ ವಾವುನ್ ಘೆವ್ನ್ ಹಾರುನ್ ಗೆಲ್ಲ್ಯಾ ಸಗ್ಳ್ಯಾ ಲೊಕಾನು, ಮಾಜೆಕ್ಡೆ ಯೆವಾ, ಅನಿ ಮಿಯಾ ತುಮ್ಕಾ ಅರಾಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:28
36 ತಿಳಿವುಗಳ ಹೋಲಿಕೆ  

ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.


ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು