Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:3 - ಕನ್ನಡ ಸತ್ಯವೇದವು C.L. Bible (BSI)

3 ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?" ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜುವಾಂವಾಚ್ಯಾ ಶಿಸಾನಿ ಜೆಜುಕ್ಡೆ ಯೆವ್ನ್, ಜುವಾಂವಾನ್ ಯೆತಲೊ ಹಾಯ್ ಮನುನ್ ಸಾಂಗಟಲ್ಲೊ ಸುಟ್ಕಾದಿನಾರೊ ತಿಯಾಚ್ ಕಾಯ್, ಅಮಿ ಅನಿ ಎಕ್ಲ್ಯಾಚಿ ವಾಟ್ ಬಗುಚಿ? ಮನುನ್ ಅಮ್ಕಾ ಸಾಂಗ್. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:3
38 ತಿಳಿವುಗಳ ಹೋಲಿಕೆ  

“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು.


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ !


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ.


‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು