Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:30 - ಕನ್ನಡ ಸತ್ಯವೇದವು C.L. Bible (BSI)

30 ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ದಿತಲೊ ಜು ಲೈ ಸಸಾರಾಚೊ, ಅನಿ ಮಿಯಾ ತುಮ್ಚ್ಯಾ ವರ್‍ತಿ ವಾವ್ತಲೆ ವಜ್ಜೆ ಹಗ್ಗುರ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:30
13 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು