Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:5 - ಕನ್ನಡ ಸತ್ಯವೇದವು C.L. Bible (BSI)

5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕುಡ್ಡ್ಯಾಕ್ ದಿಸ್ತಾ ಸೊಟ್ಟೊ ಚಲ್ತಾ, ಜೆ ಕೊನಾಕ್ ಕುಸ್ಟ್ ರೊಗ್ ಹಾಯ್ ತೊ ಪವಿತ್ರ್ ಹೊವ್ಲಾ, ಕಿಂವ್ಡೊ ಆಯ್ಕುಲಾ, ಮರಲ್ಲಿ ಲೊಕಾ ಝಿತ್ತಿ ಹೊವ್ಕ್ ಲಾಗ್ಲ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:5
41 ತಿಳಿವುಗಳ ಹೋಲಿಕೆ  

“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ.


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ.


ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.


(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು