Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:7 - ಕನ್ನಡ ಸತ್ಯವೇದವು C.L. Bible (BSI)

7 ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜುಂವಾವಾಚಿ ಶಿಸಾ ಥೈತ್ನಾ ಗೆಲ್ಲ್ಯಾ ತನ್ನಾ ಜೆಜು ಜುವಾಂವಾಚ್ಯಾ ವಿಶಯಾತ್ ಲೊಕಾನಿಕ್ಡೆ ಬೊಲುಕ್‍ಲಾಗ್ಲೊ. “ಡಂಗ್ಳಿತ್ ಜುವಾಂವಾಕ್ಡೆ ಗೆಲ್ಲ್ಯಾ ತನ್ನಾ ಕಾಯ್ ಬಗುಕ್ ಮನುನ್ ಗೆಲ್ಲ್ಯಾಶಿ? ವಾರ್‍ಯಾನ್ ಹಾಲ್ತಲಿ ಎಕ್ ಕರಾಡಾಚಿ ಕಾಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:7
15 ತಿಳಿವುಗಳ ಹೋಲಿಕೆ  

ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.


“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು