Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:25 - ಕನ್ನಡ ಸತ್ಯವೇದವು C.L. Bible (BSI)

25 ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುಕ್ ತೆನಿ ಯವಜ್ತಲೆ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಖಲೊಬಿ ಎಕ್ ದೆಸ್ ದೊನ್ ಭಾಗ್ ಹೊವ್ನ್ ಎಕಾಮೆಕಾ ಮದ್ದಿ ಝಗ್ಡುನ್ಗೆತ್ ರ್‍ಹಾಲ್ಯಾರ್, ತೊ ದೆಸ್ ಲೈ ದಿಸ್ ಠಿಕಿನಾ. ಅನಿ ಎಕ್ ಮೊಟೆ ಗಾಂವ್ ನಾಹೊಲ್ಯಾರ್ ಎಕ್ ಕುಟುಮ್‍ ದೊನ್ ಭಾಗ್ ಹೊವ್ನ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆ ನಾಸುಚ್ ಹೊವ್ನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:25
18 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು