Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:26 - ಕನ್ನಡ ಸತ್ಯವೇದವು C.L. Bible (BSI)

26 ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಚ್ ಸೈತಾನಾಚ್ಯಾ ರಾಜಾತ್ ದೊನ್ ಭಾಗ್ ಹೊವ್ನ್ ಎಕಾಮೆಕಾಕ್ಡೆ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆಚೊ ರಾಜ್ ಲಗ್ಗುನಾಚ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:26
13 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು