Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಾಗಾದರೆ ಅವನ ರಾಜ್ಯವು ಹೇಗೆ ಉಳಿದೀತು? ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾಕಾ ಗಿರೆ ಸೊಡ್ಸುಕ್ ಗಿರ್‍ಯಾಂಚೊ ಮುಖಂಡ್ ಬೆಲುಲ್ಜೆಬುಲ್ ತಾಕತ್ ದಿತಾ ಮನುನ್ ತುಮಿ ಮನುಲ್ಯಾಶಿ, ತಸೆ ಜಾಲ್ಯಾರ್ ತುಮ್ಚ್ಯಾ ವಾಂಗ್ಡಿಯಾಕ್ನಿ ಗಿರೆ ಕಾಡ್ತಲಿ ತಾಕತ್ ಖೈತ್ನಾ ಯೆತಾ? ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಯೌಜುಲ್ಯಾಸಿ ಮನುನ್ ದಾಕ್ವುನ್ ದಿತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:27
10 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು