Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:29 - ಕನ್ನಡ ಸತ್ಯವೇದವು C.L. Bible (BSI)

29 “ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಎಕ್ ಘರಾತ್ಲ್ಯಾ ಘಟ್ಮುಟ್ ಮಾನ್ಸಾಕ್ ಭಾಂದುನ್ ಘಾಲುಚ್ಯಾ ಅದ್ದಿ ತೆಚ್ಯಾ ಘರಾತ್ಲೆ ಸಾಮಾನ್ ಚೊರುನ್ ಘೆವ್ನ್ ಜಾವ್ಕ್ ಹೊತಾ ಕಾಯ್? ಹೊಯ್ನಾ, ತೆಕಾ ಘಟ್ ಭಾಂದುನ್ ಘಾಲುನ್ ಮಾನಾ ತೆಚಿ ಸಾಮಾನಾ ಘೆವ್ನ್ ಜಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:29
11 ತಿಳಿವುಗಳ ಹೋಲಿಕೆ  

ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ?


ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.


ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು