Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:32 - ಕನ್ನಡ ಸತ್ಯವೇದವು C.L. Bible (BSI)

32 ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಾನ್ಸಾಚ್ಯಾ ಲೆಕಾಚ್ಯಾ ವಿರೊದ್ ಬೊಲಲ್ಲ್ಯಾಕ್ನಿ ತರ್‍ಬಿ ಮಾಪಿ ಗಾವಿಲ್, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಜೆ ಕೊನ್ ಬೊಲ್ತಾ ತೆಕಾ ಅತ್ತಾ ಹೊಂವ್ದಿತ್, ಕನ್ನಾಬಿ ಹೊಂವ್ದಿತ್ ಮಾಪಿ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:32
35 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.


“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರಜೀವವನ್ನು ಪಡೆಯುವನು.


ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.


ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.


ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು