Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:34 - ಕನ್ನಡ ಸತ್ಯವೇದವು C.L. Bible (BSI)

34 ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸಾಪಾಚ್ಯಾ ಪಿಲ್ಲಾನೊ! ತುಮಿ ಬುರ್ಶೆ ರ್‍ಹಾತಾನಾ, ಬರೆ ಕಶೆ ಬೊಲುಕ್ ಹೊತಾ? ಜೆ ಕಾಯ್ ಮನಾತ್ ಹಾಯ್, ತೆಚ್ ತೊಂಡ್ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:34
28 ತಿಳಿವುಗಳ ಹೋಲಿಕೆ  

ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.


ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II


ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು