Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:35 - ಕನ್ನಡ ಸತ್ಯವೇದವು C.L. Bible (BSI)

35 ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಎಕ್ ಬರೊ ಮಾನುಸ್, ಅಪ್ನಾಚ್ಯಾ ಮನಾತ್ನಾ ಬರೆಚ್ ಭಾಯ್ರ್ ಕಾಡ್ತಾ. ಎಕ್ ಬುರ್ಸೊ ಮಾನುಸ್ ಅಪ್ನಾಚ್ಯಾ ಮನಾತ್ನಾ ಬುರ್ಶೆಚ್ ಭಾಯ್ರ್ ಕಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:35
17 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.


ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.


ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು