Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:41 - ಕನ್ನಡ ಸತ್ಯವೇದವು C.L. Bible (BSI)

41 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಝಡ್ತಿಚ್ಯಾ ದಿಸಿ ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಜೊನಾನ್ ಸಾಂಗಟಲ್ಲೆ ತೆನಿ ಆಯಿಕ್ಲ್ಯಾನಿ, ಅನಿ ಪಾಪಾನಿತ್ನಾ ದೆವಾಕ್ಡೆ ಪರತ್ಲ್ಯಾನಿ, ಖರೆ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಜೊನಾಚ್ಯಾನ್ಕಿ ಮೊಟೊ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:41
20 ತಿಳಿವುಗಳ ಹೋಲಿಕೆ  

ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.


ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು