Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:42 - ಕನ್ನಡ ಸತ್ಯವೇದವು C.L. Bible (BSI)

42 ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಝಡ್ತಿಚ್ಯಾ ದಿಸಿ “ಶೆಬಾ ಮನ್ತಲ್ಯಾ ದೆಸಾಚಿ ರಾನಿ ಇಬೆ ರ್‍ಹಾವ್ನ್, ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ದೆಸಾಕ್ನಾ ಸಗ್ಳಿ ವಾಟ್‍ಬರ್ ಚಲುನ್ಗೆತ್ ತಿ ಸಾಲ್ಮಾವಾಚ್ಯಾ ಶಾನ್‍ಪಾನಾಚೆ ಶಿಕಾಪ್ ಆಯ್ಕುಕ್ ಮನುನ್ ಯೆಲ್ಲಿ, ಖರೆ ಮಿಯಾ ಖರೆಚ್ ಸಾಂಗ್ತಾ, ಹಿತ್ತೆ ಸೊಲೊಮೊನಾಚ್ಯಾನ್ಕಿ ಮೊಟೊ ಎಕ್ಲೊ ಹಾಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:42
22 ತಿಳಿವುಗಳ ಹೋಲಿಕೆ  

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.


ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.


ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು.


ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.


ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು