Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:44 - ಕನ್ನಡ ಸತ್ಯವೇದವು C.L. Bible (BSI)

44 ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ತಿರಿಗಿ ಹೋಗುತ್ತೇನೆ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ ಗುಡಿಸಿ ಅಲಂಕರಿಸಿದ್ದೂ ಆಗಿರುವದನ್ನು ಕಂಡು ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೊ ಗಿರೊ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ ಮನ್ತಾ, ಅನಿ ಪರ್ತುನ್ ಯೆಲ್ಲ್ಯಾ ತನ್ನಾ, ತೆಕಾ ಜಾಗೊ ಖಾಲಿ ದಿಸ್ತಾ ಅನಿ ಪವಿತ್ರ್ ಅನಿ ಬರೊ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:44
23 ತಿಳಿವುಗಳ ಹೋಲಿಕೆ  

ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


“ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.


ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.


“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು