Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:46 - ಕನ್ನಡ ಸತ್ಯವೇದವು C.L. Bible (BSI)

46 ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಜೆಜು ಲೊಕಾನಿಕ್ಡೆ ಬೊಲುನ್ಗೆತುಚ್ ಹೊತ್ತೊ, ತನ್ನಾ ತೆಚಿ ಬಾಯ್‍ ಅನಿ ಭಾವಾ ಥೈ ಯೆಲಿ. ತೆಚೆಕ್ಡೆ ಬೊಲುಕ್ ಪಾಜೆ ಮನುನ್ ತೆನಿ ಭಾಯ್ರುಚ್ ಇಬೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:46
26 ತಿಳಿವುಗಳ ಹೋಲಿಕೆ  

ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.


ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಯೇಸುಸ್ವಾಮಿಯ ಸೋದರರು ಹಬ್ಬಕ್ಕೆಹೋದರು. ಯೇಸುವೂ ಅಲ್ಲಿಗೆ ಹೋದರು. ಬಹಿರಂಗವಾಗಿ ಅಲ್ಲ, ಗುಟ್ಟಾಗಿ.


ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು.


ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.


ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!


“ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು