Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:5 - ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ವಿುಕ್ಕಾದ ದಿನಗಳಂತೆ ಮಾಡಿದಾಗ್ಯೂ ಅವರು ತಪ್ಪಿಗೆ ಗುರಿಯಾಗುವದಿಲ್ಲ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ನಾಹೊಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಎಕ್ ಯಾಜಕಾನ್ ದೆವಾಚ್ಯಾ ಗುಡಿತ್ ಅರಾಮ್ ಘೆತಲ್ಯಾ ದಿಸಾಚೊ ಮಟ್ಲ್ಯಾರ್ ಸಬ್ಬಾತಾಚೊ ಖಾಯ್ದೊ ಮೊಡ್ಲ್ಯಾರ್‍ಬಿ, ತೆಚಿ ಚುಕ್‍ ನಾ, ಮನುನ್ ವಾಚ್ವುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:5
7 ತಿಳಿವುಗಳ ಹೋಲಿಕೆ  

ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು