Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:50 - ಕನ್ನಡ ಸತ್ಯವೇದವು C.L. Bible (BSI)

50 ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಜೆ ಕೊನ್ ಸರ್ಗಾ ವೈಲ್ಯಾ ಮಾಜ್ಯಾ ಬಾಬಾಕ್ ಕಶೆ ಪಾಜೆ ತಸೆ ಕರ್‍ತಾ, ತೊಚ್ ಮಾಜೊ ಭಾವ್, ಮಾಜಿ ಭೆನ್, ಅನಿ ಮಾಜಿ ಬಾಯ್, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:50
38 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.


ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.


ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು;


ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು