Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:6 - ಕನ್ನಡ ಸತ್ಯವೇದವು C.L. Bible (BSI)

6 ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಇಲ್ಲಿ ದೇವಾಲಯಕ್ಕಿಂತ ಹೆಚ್ಚಿನವನು ಇದ್ದಾನೆಂದು ನಿಮಗೆ ಹೇಳುತ್ತೇನೆ. ನನಗೆ ಯಜ್ಞವು ಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ಗುಡಿನ್ಕಿ ಮೊಟೊ ಕೊನ್ಕಿ ಹಿತ್ತೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:6
12 ತಿಳಿವುಗಳ ಹೋಲಿಕೆ  

“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು