Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:15 - ಕನ್ನಡ ಸತ್ಯವೇದವು C.L. Bible (BSI)

15 ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್‍ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:15
25 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.


ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು