Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:16 - ಕನ್ನಡ ಸತ್ಯವೇದವು C.L. Bible (BSI)

16 “ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನಿಮ್ಮ ಕಣ್ಣು ಕಾಣುತ್ತವೆ, ನಿಮ್ಮ ಕಿವಿ ಕೇಳುತ್ತವೆ; ಆದದರಿಂದ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಖರೆ ತುಮಿ, ಕವ್ಡೆ ಸುಖಿ! ತುಮ್ಚ್ಯಾ ಡೊಳ್ಯಾಕ್ನಿ ದಿಸ್ತಾ ಅನಿ ತುಮ್ಚ್ಯಾ ಕಾನಾಕ್ನಿ ಆಯಿಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:16
8 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು