Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:19 - ಕನ್ನಡ ಸತ್ಯವೇದವು C.L. Bible (BSI)

19 ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸರ್‍ಗಾಚ್ಯಾ ರಾಜಾಚಿ ಬರಿ ಖಬರ್ ಆಯಿಕ್ತ್ಯಾತ್, ಖರೆ ತೆಂಕಾ ಅರ್ತ್‍ ಹೊಯ್ನಾ. ಹಿ ಲೊಕಾ ವಾಟೆಚ್ಯಾ ದಂಡೆಕ್ ಪಡಲ್ಲ್ಯಾ ಭ್ಹಿಂಯಾ ಬಾಸೆನ್. ಸೈತಾನ್ ಯೆತಾ ಅನಿ ತೆಂಚ್ಯಾ ಮನಾತ್ ಸಿಪಡಲ್ಲೆ ಭ್ಹಿಂಯ್ ಕಾಡುನ್ ಘೆವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:19
36 ತಿಳಿವುಗಳ ಹೋಲಿಕೆ  

ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.


ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು.


ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ.


ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.


ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು