ಮತ್ತಾಯ 13:22 - ಕನ್ನಡ ಸತ್ಯವೇದವು C.L. Bible (BSI)22 ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಕಾಟ್ಯಾಂಚ್ಯಾ ಝಿಳಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚೆ ಉತರ್ ಆಯಿಕ್ತ್ಯಾತ್; ಖರೆ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾ ಅನಿ ಸಾವ್ಕಾರ್ಕಿ ಜೊಡ್ತಲಿ ಆಶಾ ದೆವಾಚ್ಯಾ ಬರ್‍ಯಾ ಖಬ್ರೆಕ್ ದಡ್ಪುನ್ ಧರ್‍ತಾ, ಅನಿ ತೆಂಕಾ ಫಳ್ ದಿವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |