Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:23 - ಕನ್ನಡ ಸತ್ಯವೇದವು C.L. Bible (BSI)

23 ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್‍ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:23
43 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು