Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:30 - ಕನ್ನಡ ಸತ್ಯವೇದವು C.L. Bible (BSI)

30 ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸುಗ್ಗಿ ಯೆಯ್‍ ಪತರ್ ಕಳೆಬಿ ಘವ್‍ಬಿ ವಾಂಗ್ಡಾಚ್ ರ್‍ಹಂವ್ದಿ, ತನ್ನಾ ಸುಗ್ಗಿಚ್ಯಾ ದಿಸಿ ಕಾಮ್ ಕರ್‍ತಲ್ಯಾಕ್ನಿ ಮಿಯಾ ಅದ್ದಿ ಕಳೆ ಉಪ್ಸುನ್ ಕಾಡುನ್ ಜಾಳ್ವುನ್ ಟಾಕುಸಾಟ್ನಿ ಪೆಂಡಿಯಾ ಭಾಂದಾ ಅನಿ ಮಾನಾ ಘವ್ ಗೊಳಾ ಕರಾ ಅನಿ ಮಾಜ್ಯಾ ತಟ್ಟ್ಯಾತ್ ಭರುನ್ ಥವಾ ಮನುನ್ ಮಿಯಾ ಸಾಂಗ್ತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:30
20 ತಿಳಿವುಗಳ ಹೋಲಿಕೆ  

ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.


ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು