Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:35 - ಕನ್ನಡ ಸತ್ಯವೇದವು C.L. Bible (BSI)

35 “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗೆ - ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು ಎಂದು ಒಬ್ಬ ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತುಮ್ಚ್ಯಾಕ್ಡೆ ಬೊಲ್ತಾನಾ ಮಿಯಾ ಕಾನಿಯಾ ವಾಪರ್‍ತಾ. ಜಗ್ ರಚಲ್ಲ್ಯಾಕ್ನಾ ನಿಪುನ್ ಹೊತ್ತೆ ಸಗ್ಳೆ ಮಿಯಾ ತೆಂಕಾ ಸೊಡ್ಸುನ್ ಸಾಂಗ್ತಾ. ಮನುನ್ ಪ್ರವಾದ್ಯಾನಿ ಸಾಂಗಟಲ್ಲೆ ಖರೆ ಮನುನ್ ದಾಕ್ವುಸಾಟ್ನಿ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:35
24 ತಿಳಿವುಗಳ ಹೋಲಿಕೆ  

ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಆಗ ಯೇಸು ಇಂತೆಂದು ಪ್ರಬೋಧಿಸಿದರು.


ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು