ಮತ್ತಾಯ 13:36 - ಕನ್ನಡ ಸತ್ಯವೇದವು C.L. Bible (BSI)36 ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜೆಜು ಲೊಕಾಂಚ್ಯಾ ತಾಂಡ್ಯಾಕ್ ಸೊಡುನ್ ಭುತ್ತುರ್ ಘರಾತ್ ಗೆಲೊ. ತನ್ನಾ ತೆಚಿ ಶಿಸಾ ತೆಚೆಕ್ಡೆ ಯೆಲಿ. ಅನಿ,“ಶೆತಾತ್ಲ್ಯಾ ಕಳ್ಯಾಂಚ್ಯಾ ಕಾನಿಚೊ ಅರ್ತ್ ಅಮ್ಕಾ ಸಾಂಗ್.” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |