Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:42 - ಕನ್ನಡ ಸತ್ಯವೇದವು C.L. Bible (BSI)

42 ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತಿ ದೆವಾಚಿ ದುತಾ ತ್ಯಾ ಲೊಕಾಕ್ನಿ ಜಳ್ತಲ್ಯಾ ಆಗಿತ್ ಟಾಕ್ತ್ಯಾತ್. ಥೈ ತೆನಿ ರಡ್ತ್ಯಾತ್ ಅನಿ ಕಟ್‍ಕಟ್‍ ದಾತಾ ಚಾವ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:42
19 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು