Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:43 - ಕನ್ನಡ ಸತ್ಯವೇದವು C.L. Bible (BSI)

43 ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ದೆವಾಚಿ ಲೊಕಾ ತೆಂಚ್ಯಾ ದೆವಾ ಬಾಬಾಚ್ಯಾ ರಾಜಾತ್ ದಿಸ್ ಹೊಳಾವ್ತಲ್ಯಾ ಸರ್ಕೆ ಹೊಳ್ವುತ್ಯಾತ್. ಕೊನಾಕ್ ಕಾನಾ ತೆನಿ ಆಯ್ಕುಂದಿತ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:43
14 ತಿಳಿವುಗಳ ಹೋಲಿಕೆ  

ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.


ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು