Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:55 - ಕನ್ನಡ ಸತ್ಯವೇದವು C.L. Bible (BSI)

55 ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಇವನು ಆ ಬಡಗಿಯ ಮಗನಲ್ಲವೇ. ಇವನ ತಾಯಿ ಮರಿಯಳೆಂಬವಳಲ್ಲವೇ. ಯಾಕೋಬ ಯೋಸೇಫ ಸೀಮೋನ ಯೂದ ಇವರು ಇವನ ತಮ್ಮಂದಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಹ್ಯೊ ಎಕ್ ಬಡಗಿಯಾಚೊ ಲೆಕ್ ನ್ಹಯ್ ಕಾಯ್? ಮರಿ ಹೆಚಿ ಬಾಯ್, ಅನಿ ಜಾಕೊಬ್, ಜುಜೆ, ಸಿಮಾವ್, ಅನಿ ಜುದಾಸ್ ಹೆಚಿ ಭಾವಾ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:55
23 ತಿಳಿವುಗಳ ಹೋಲಿಕೆ  

ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು