Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾ ಎಳಾರ್ ಗಾಲಿಲಿಯಾಚೊ ರಾಜಾ ಹೊವ್ನ್ ಹೊತ್ತ್ಯಾ ಹೆರೊದಾನ್ ಜೆಜುಚ್ಯಾ ವಿಶಯಾತ್ ಆಯಿಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:1
15 ತಿಳಿವುಗಳ ಹೋಲಿಕೆ  

ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.


ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು.


ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.


ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.


ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು