Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:11 - ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ತೆ ಟಕ್ಲೆ ಎಕ್ ಆಯ್ದಾನಾತ್ನಾ ಹಾನುನ್ ತ್ಯಾ ಚೆಡ್ವಾಚ್ಯಾ ಹಾತಿತ್ ದಿವ್ನ್ ಹೊಲೆ. ತ್ಯಾ ಚೆಡ್ವಾನ್ ತೆ ಅಪ್ನಾಚ್ಯಾ ಬಾಯ್‍ಕಡೆ ನ್ಹೆವ್ನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:11
12 ತಿಳಿವುಗಳ ಹೋಲಿಕೆ  

ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.


ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;


ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು