Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:15 - ಕನ್ನಡ ಸತ್ಯವೇದವು C.L. Bible (BSI)

15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾಚ್ ದಿಸ್ ಸಾಂಚೆಕ್ಡೆ ತೆಚಿ ಶಿಸಾ ಯೆಲಿ. ಅನಿ, “ಅತ್ತಾ ಬಗಟ್ಲ್ಯಾರ್ ಲೈ ಎಳ್ ಹೊಲೊ ಹ್ಯೊ ಜಾಗೊ ಬಗಟ್ಲ್ಯಾರ್ ಎಕ್ ನಮುನಿ ಭಾಯ್ರ್ ಕಾಡುನ್ ಟಾಕ್ಲ್ಯಾ ಸರ್ಕೊ ಹಾಯ್, ಲೊಕಾಕ್ನಿ ಧಾಡುನ್ ದಿ. ತೆನಿ ಗಾಂವಾತ್ನಿ ಜಾವ್ನ್ ಜೆವ್ನಾಕ್ ಇಕಾತ್ ಹಾನುನ್ದಿತ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:15
7 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.


ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.


ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.


ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.


ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು