Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:23 - ಕನ್ನಡ ಸತ್ಯವೇದವು C.L. Bible (BSI)

23 ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಸಗ್ಳ್ಯಾ ಲೊಕಾಕ್ನಿ ಧಾಡುನ್ ಹೊಲ್ಲ್ಯಾ ತನ್ನಾ ತೊ ಎಕ್ಲೊಚ್ ಮಾಗ್ನಿ ಕರುಕ್ ಮನುನ್ ಎಕ್ ಮಡ್ಡಿ ವರ್‍ತಿ ಗೆಲೊ. ತನ್ನಾ ಕಾಳೊಕ್ ಹೊವ್ನಗೆತ್ ಯೆಲ್ಲೊ; ತನ್ನಾ ಥೈ ಜೆಜು ಎಕ್ಲೊಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:23
11 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.


ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು