Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:31 - ಕನ್ನಡ ಸತ್ಯವೇದವು C.L. Bible (BSI)

31 ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತಾಬೊಡ್ತೊಬ್ ಜೆಜು ತೆಚೆಕ್ಡೆ ಯೆಲೊ ಅನಿ ತೆಕಾ ಧರ್‍ಲ್ಯಾನ್. ಅನಿ, “ಕವ್ಡೊ ಕಮಿ ವಿಶ್ವಾಸ್ ತುಜೊ! ತಿಯಾ ಕಶ್ಯಾಕ್ ಸಂಶೆವ್ ಕರ್‍ಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:31
23 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).


ಆಕೆ ಅವರೆಲ್ಲರನ್ನು ಸತ್ಕರಿಸಿದಳು.


ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


“ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು.


ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.


ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.


ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.


ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು