Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:35 - ಕನ್ನಡ ಸತ್ಯವೇದವು C.L. Bible (BSI)

35 ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆ ಸ್ಥಳದವರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ಆತನ ಬಳಿಗೆ ಕರತರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಥೈತ್ಲ್ಯಾ ಲೊಕಾನಿ ಜೆಜುಕ್ ವಳಕ್ಲ್ಯಾನಿ ಅನಿ ಅಪ್ನಾಚ್ಯಾ ದೆಸಾತ್ಲ್ಯಾ ಸಗ್ಳ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:35
9 ತಿಳಿವುಗಳ ಹೋಲಿಕೆ  

ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.


ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು.


ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.


ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.


ಆಕೆ ಪೇತ್ರನ ಸ್ವರವನ್ನು ಗುರುತು ಹಚ್ಚಿದ್ದೇ ಆನಂದಪರವಶಳಾಗಿ ಬಾಗಿಲನ್ನು ಸಹ ತೆರೆಯದೆ ಒಳಕ್ಕೆ ಓಡಿದಳು. ಪೇತ್ರನು ಬಾಗಿಲ ಹೊರಗೆ ನಿಂತಿದ್ದಾನೆಂದು ಒಳಗಿದ್ದವರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು